ಡಿ. 1-3 ಆಳ್ವಾಸ್ ನುಡಿಸಿರಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಹದಿನಾಲ್ಕನೇ ವರ್ಷದ ಕನ್ನಡ ನಾಡು ನುಡಿ ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2017 ಡಿಸೆಂಬರ್ 1ರಿಂದ 3ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿಸೆಂಬರ್ 1ರಂದು ಬೆಳಿಗ್ಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದ್ದು 3ರಂದು ಸಮಾಪನಗೊಳ್ಳಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು ಶೀಘ್ರವಾಗಿ ಅಂತಿಮ ಸ್ಪರ್ಶ ನೀಡಲಾಗುವುದು. ಸಮ್ಮೇಳನವನ್ನು ಅತ್ಯಂತ ಅರ್ಥಪೂರ್ಣವಾಗಿ ಮತ್ತು ಆಕರ್ಷಕವಾಗಿ ಆಯೋಜಿಸಲಾಗುವುದು. ಪ್ರತಿನಿಧಿಯಾದ ಬಯಸುವ ಕನ್ನಡಾಭಿಮಾನಿಗಳು ರೂಪಾಯಿ 100 ಪ್ರತಿನಿಧಿ ಶುಲ್ಕವನ್ನು ನೀಡಿ ಸದಸ್ಯರಾಗಬಹುದು. ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿದೆ. ಸಮ್ಮೇಳನದ ಯಶಸ್ವಿಗಾಗಿ ಸಿದ್ಧತೆಗಳು ನಡೆಯುತ್ತಿದೆ. ಕನ್ನಡ ನಾಡು ನುಡಿ ಸಂಸ್ಕøತಿ ಪ್ರಿಯ ಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಆಳ್ವಾಸ್ ನುಡಿಸಿರಿಯನ್ನು ಯಶಸ್ಸುಗೊಳಿಸಬೇಕು. ಹೆಚ್ಚಿನ ಮಾಹಿತಿಗಾಗಿ: 08258-261229 ಸಂಪರ್ಕಿಸಬಹುದು ಎಂದು ಅವರು ಹೇಳಿದರು.


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.