ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: ಆಳ್ವಾಸ್ ಕಾಲೇಜಿಗೆ ಪ್ರಶಸ್ತಿ

ಮೂಡುಬಿದಿರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಈಚೆಗೆ ನಡೆದ ಮೈಸೂರು ವಿಭಾಗ ಮಟ್ಟ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ತಂಡವು ಹಲವು ಪದಕಗಳನ್ನು ಮುಡಿಗೇರಿಸಿಕೊಂಡಿದೆ.
ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಮಂಗಳೂರು, ಉಡುಪಿ, ಕೊಡಗು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಈಚೆಗೆ ನಡೆದಿತ್ತು. ಆಳ್ವಾಸ್ ಕಾಲೇಜು ತಂಡದ ಪುರುಷ ಮತ್ತು ಮಹಿಳಾ ವಿಭಾಗಗಳು ಅಥ್ಲೆಟಿಕ್ಸ್ ನಲ್ಲಿ 11 ಚಿನ್ನ, 11 ಬೆಳ್ಳಿ, 07 ಕಂಚಿನ ಪದಕಗಳೊಂದಿಗೆ ಒಟ್ಟು 29 ಪದಕ ಪಡೆಯಿತು.
ಕುಸ್ತಿಯಲ್ಲಿ 12 ಚಿನ್ನ, 07 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 21 ಪದಕ, ಯೋಗದಲ್ಲಿ 01 ಚಿನ್ನ, 02 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 05 ಪದಕ ಪಡೆಯಿತು.
ಭಾರ ಎತ್ತುವ ಸ್ಪರ್ಧೆಯಲ್ಲಿ 11 ಚಿನ್ನ, 05 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 18 ಪದಕವನ್ನು ಪಡೆದುಕೊಂಡಿತು.
ಎರಡೂ ವಿಭಾಗಗಳಲ್ಲಿ ಕಬಡ್ಡಿ ಹಾಗೂ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಹಾಗೂ ಖೋ-ಖೋದಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆಯಿತು.
ಅಕ್ಟೋಬರ್ 03ರಿಂದ 06ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ (ಸಿಎಮ್ ಕಪ್ ಕ್ರೀಡಾಕೂಟ)ಕ್ಕೆ ಆಳ್ವಾಸ್ ಕಾಲೇಜಿನ 70 ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.