ವಿದ್ಯಾಗಿರಿ: ನವದೆಹಲಿಯಲ್ಲಿ ನಡೆಯಲಿರುವ 2025ರ ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರಕ್ಕೆ (ಆರ್‌ಡಿಸಿ) ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಎನ್‌ಸಿಸಿ ಘಟಕದ ಐವರು ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ.
ವಾಯುದಳ ವಿಭಾಗದಲ್ಲಿ ಎನ್‌ಸಿಸಿ ಕರ್ನಾಟಕ ಹಾಗೂ ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲಿರುವ ಹಾರ್ದಿಕ್ ಶೆಟ್ಟಿ, ನಿರೂಪ್ ಎಸ್., ಜೇವಿಟಾ ಪರ್ಲ್ ಹಾಗೂ ಪ್ರಶಸ್ತಿ ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಪ್ರಶಸ್ತಿ ಈ ಬಾರಿಯ ಪ್ರಧಾನ ಮಂತ್ರಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾಳೆ.
ನೌಕಾದಳ ವಿಭಾಗದಲ್ಲಿ 5ನೇ ಕರ್ನಾಟಕ ನೌಕಾ ಘಟಕವನ್ನು ಪ್ರತಿನಿಧಿಸಲಿರುವ ಅಜ್‌ರಾಜ್ ಆಯ್ಕೆಯಾಗಿದ್ದಾರೆ.
ಇಲ್ಲಿಯವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 44 ಕೆಡೆಟ್‌ಗಳು ಗಣರಾಜ್ಯೋತ್ಸವ ದಿನದ ಪಥಸಂಚಲನ ಶಿಬಿರದಲ್ಲಿ ಪಾಲ್ಗೊಂಡಿದ್ದು, ಈ ಬಾರಿಯ 5 ಜನರು ಸೇರಿದಂತೆ ಒಟ್ಟು 49 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ.
ಆಳ್ವಾಸ್ ವಿದ್ಯಾರ್ಥಿಗಳ ಕೊಡುಗೆ
ಆಳ್ವಾಸ್ ಸಂಸ್ಥೆಯಲ್ಲಿ ಇಲ್ಲಿಯವರೆಗೆ 57ಕ್ಕೂ ಅಧಿಕ ಸೇನಾ ಶಿಬಿರಗಳು ನಡೆದಿದ್ದು, ಐದು ಸೇನಾ ನೇಮಕಾತಿ ರ‍್ಯಾಲಿಗಳು, ಅಗ್ನಿಪಥ ನೇಮಕಾತಿ ಪರೀಕ್ಷೆ ಸೇರಿದಂತೆ ಹತ್ತು ಹಲವು ಎನ್‌ಸಿಸಿಯ ಚಟುವಟಿಕೆಗಳು ಜರಗುತ್ತಿರುತ್ತವೆ. ಆಳ್ವಾಸ್ ಸಂಸ್ಥೆ 4 ಬಾರಿ ಅತ್ಯುತ್ತಮ ಸಂಸ್ಥೆ ಪ್ರಶಸ್ತಿ ಪಡೆದಿದೆ.
ಇವರ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಅಭಿನಂದಿಸಿದ್ದಾರೆ.