ಆಳ್ವಾಸ್ ಪದವಿಪೂರ್ವ ಕಾಲೇಜು ಶಿಕ್ಷಕ- ಪಾಲಕರ ಸಭೆ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಬೇಕಾದ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರ ಮೇಲಿದೆ. ಪರೀಕ್ಷೆಗಳು ಸಮೀಪಿಸುತ್ತಿರುವಂತೆ ವಿದ್ಯಾರ್ಥಿಗಳು ಆಂತರಿಕ ಒತ್ತಡಕ್ಕೆ ಒಳಗಾಗುತ್ತಾರೆ. ಅದನ್ನು ಸಮರ್ಥ ಪ್ರಯತ್ನದಿಂದ ದೂರಮಾಡಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ಪಾಲಕ – ಶಿಕ್ಷಕರ ಸಭೆಯಲ್ಲಿ ಮಾತನಾಡುತ್ತಿದ್ದರು.
ಪರೀಕ್ಷೆಗೆ ಬೇಕಾದ ತಯಾರಿಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕು. ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡಗಳನ್ನು ಹೇರಬಾರದು. ವಿದ್ಯಾರ್ಥಿಗಳಿಗೆ ಪರೀಕ್ಷೆ ಎನ್ನುವುದು  ಕಷ್ಟವಾಗದೆ ಇಷ್ಟವಾಗುವಂತೆ ಮಾಡಬೇಕು. ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳ ಜೊತೆಗೆ ಪೂರಕ ಪರೀಕ್ಷೆಗಳಿಗೆ ಕೂಡ ಸೂಕ್ತ ಸಿದ್ಧತೆ ಮಾಡಬೇಕಾಗಿದೆ.  ಪದವಿ ಪೂರ್ವಶಿಕ್ಷಣ ಎಂಬುದು ಭವಿಷ್ಯದ ದೃಷ್ಟಿಯಿಂದ ಮಹತ್ವದ ಘಟ್ಟ.
ಕಾಲೇಜಿನ ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪಾಲಕರು ಸಭೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪೆÇ್ರ. ರಮೇಶ್ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ವೇಣುಗೋಪಾಲ ಶೆಟ್ಟಿ ಹಾಗೂ ಉದಯ ಮಂಜುನಾಥ ಆಡೇಮನೆ ಕಾರ್ಯಕ್ರಮ ನಿರೂಪಿಸಿದರು.