ವಿದ್ಯಾಗಿರಿಯಲ್ಲಿ ಮೊದಲನೇ ಹಂತದ ವಿದ್ಯಾರ್ಥಿ ಲಸಿಕಾ ಅಭಿಯಾನ: 1,616 ಮಂದಿಗೆ ಪ್ರಥಮ ಡೋಸ್

ಆಳ್ವಾಸ್‍ನಲ್ಲಿ ವಿದ್ಯಾರ್ಥಿಗಳಿಗಾಗಿ ಬೃಹತ್ ಉಚಿತ ಲಸಿಕಾ ಅಭಿಯಾನಮೂಡುಬಿದಿರೆ, ಜೂ. 28: ಕರ್ನಾಟಕ ಸರಕಾರದ ವಿದ್ಯಾರ್ಥಿ ಲಸಿಕಾ ಅಭಿಯಾನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಹಯೋಗದೊಂದಿಗೆ ಆಳ್ವಾಸ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು.

ಆಳ್ವಾಸ್ ಕಾಲೇಜು ಸೇರಿದಂತೆ ಮೂಡುಬಿದಿರೆಯ ವಿವಿಧ ಕಾಲೇಜುಗಳ 1,616 ಮಂದಿ ವಿದ್ಯಾರ್ಥಿಗಳಿಗೆ ಕೊವಿಲ್ಸ್ ಲಸಿಕೆಯ ಪ್ರಥಮ ಡೋಸ್ ಪಡೆದರು. ಆಳ್ವಾಸ್ ಕಾಲೇಜಿನ ಸುಂದರಿ ಆನಂದ ಆಳ್ವ ಆವರಣದ ನುಡಿಸಿರಿ ವೇದಿಕೆಯಲ್ಲಿ ಲಸಿಕೆ ಅಭಿಯಾನದ ವ್ಯವಸ್ಥೆ ಮಾಡಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವೈದ್ಯಕೀಯ ವೃಂದ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳು ಅಭಿಯಾನದ ಸುವ್ಯವಸ್ಥೆಯನ್ನು ನೋಡಿಕೊಂಡರು.

ಮೂಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

ಮೂಡುಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್ ಮುಖ್ಯಾಧಿಕಾರಿಕಾರಿ ಇಂದು, ಎಂ.ಸಿ.ಎಸ್. ಬ್ಯಾಂಕ್‌ನ ಅಧ್ಯಕ್ಷ ಬಾಹುಬಲಿ ಪ್ರಸಾದ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಲಸಿಕೆ ಅಭಿಯಾನದ ನೋಡಲ್ ಆಫೀಸರ್ ಡಾ. ಸುಭಾಷ್ ಶೆಟ್ಟಿ, ಡಾ. ಮನಿಷಾ, ಸೀನಿಯರ್ ಹೆಲ್ತ್ ಇನ್‌ಸ್ಪೆಕ್ಟರ್‌ ಖಾದರ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಶ್ರೀ ಧವಳಾ ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್ ಅಭಿಯಾನದಲ್ಲಿ ಭಾಗಿಯಾದರು.


About Alva's

Alva’s Education Foundation is a multifaceted organization founded by Dr. M. Mohan Alva and it is considered as the crown of Moodbidri.